

ಬಂದಾರು: ಬಂದಾರು ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ದಿನೇಶ್ ಖಂಡಿಗ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜು.20ರಂದು ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಕರಾಯ ಮುಖ್ಯೋಪಾಧ್ಯಯ ಬಸವಲಿಂಗಪ್ಪ ವಹಿಸಿದರು. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ವರದಿ ಮಂಡಿಸಿದರು. ಲೆಕ್ಕ ಪತ್ರವನ್ನು ದಿನಕರ ಸಭೆಗೆ ಮಂಡಿಸಿದರು.
ಇಲಾಖೆ ಅಧಿಕಾರಿಗಳಾದ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.
ಬಂದಾರು ಗ್ರಾ.ಪಂ. ಉಪಾಧ್ಯಕ್ಷೆ ಪುಷ್ಪವತಿ, ಸದಸ್ಯರಾದ ಪರಮೇಶ್ವರಿ ಗೌಡ, ಗಂಗಾಧರ್ ಪೂಜಾರಿ, ಸುಚಿತ್ರ, ಪವಿತ್ರ, ಚೇತನ, ವಿಮಲಾ, ಮೋಹನ್, ಅನಿತಾ, ಭಾರತಿ, ಬಾಲಕೃಷ್ಣ ಗೌಡ, ಶಿವ ಗೌಡ, ಶಿವಪ್ರಸಾದ್, ಮಂಜುಶ್ರೀ, ಶಾಂತ ಹಾಗೂ ಗ್ರಾಮಸ್ಥರು ಸಿಬ್ಬಂದಿ ವರ್ಗದರು ಉಪಸ್ಥಿತರಿದ್ದರು.