

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಬಿಲ್ಲವ ಮಹಿಳಾ ಬಿಲ್ಲವ ವೇದಿಕೆ, ಮತ್ತು ಯುವ ಬಿಲ್ಲವ ವೇದಿಕೆಯ ಜಂಟಿ ಸಹಕಾರದಲ್ಲಿ ಆಟಿದ ಅಟಿಲ್ದ ಕೂಟ ಕಾರ್ಯಕ್ರಮ ಜು.20ರಂದು ಶ್ರೀ ಗುರುನಾರಾಯಣ ಸಂಕೀರ್ಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ವಹಿಸಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್ ಚೆನ್ನ ಮನೆ ಆಟ ಆಡುವ ಮೂಲಕ ಚಾಲನೆ ನೀಡಿದರು.

ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಂ.ಕೆ.ಪ್ರಸಾದ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಆಟಿದ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಕಾರ್ಯದರ್ಶಿ ನಿತೇಶ್ ಹೆಚ್., ಮಹಿಳಾ ಬಿಲ್ಲವ ವೇದಿಕೆಯ ಕಾರ್ಯದರ್ಶಿ ಶಾಂಭವಿ ಪಿ.ಬಂಗೇರ ಗೌರವ ಉಪಸ್ಥಿತರಿದ್ದರು.
ಸಂಘದ ಮಾಜಿ ಅಧ್ಯಕ್ಷರುಗಳು, ನಿರ್ದೇಶಕರು, ಬಿಲ್ಲವ ಮಹಿಳಾ ವೇದಿಕೆಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ವಿವಿಧ ಗ್ರಾಮ ಸಮಿತಿಗಳ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು. ವಿವಿಧ ಗ್ರಾಮದ ಮಹಿಳೆಯ ಆಟಿಯ ತಿಂಗಳ ವಿವಿಧ ಖಾದ್ಯಗಳನ್ನು ತಂದು ಸಹ ಭೋಜನ ನಡೆಯಿತು.