ಬೆಳಾಲು: ನೇತ್ರ ವೈದ್ಯರ ನಡೆ ಪಂಚಾಯತ್ ಕಡೆ ಎಂಬ ಯೋಜನೆಯಡಿಯಲ್ಲಿ ಬೆಳಾಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜುಲೈ 21ರಂದು ಗ್ರಾಮ ಪಂಚಾಯತ್ ಬೆಳಾಲು, ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ರಿ. ಬೆಳಾಲು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸoಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ನಡೆಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ರವರು ನಡೆಸಿಕೊಟ್ಟರು.ಸುಮಾರು 120ಕ್ಕೂ ಹೆಚ್ಚು ಜನರ ಕಣ್ಣಿನ ತಪಾಸಣೆಯನ್ನು ನಡೆಸಲಾಯಿತು. ಶಿಬಿರದ ನಿರ್ದೇಶಕ ಮುರಳಿಧರ ಸಿ ಎಚ್ ಇವರು ಕಾರ್ಯಕ್ರಮವನ್ನು ಸಂಯೋಜಿಸಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಸೇವಾ ಸಹಕಾರಿ ಬ್ಯಾಂಕಿನ ಮ್ಯಾನೇಜರ್, ಪಂಚಾಯತ್ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಿಬ್ಬಂದಿಗಳು, ಹಾಲುಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯವರು, ಗ್ರಾಮ ಅಭಿವೃದ್ಧಿ ಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.ಜೊತೆಗೆ ಆರ್ಥಿಕ ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್ ಇವರು ಪ್ರಧಾನ ಮಂತ್ರಿ ಜನ ಸುರಕ್ಷಾ ವಿಮೆಯ ಸೌಲಭ್ಯದ ಬಗ್ಗೆ ಮಾಹಿತಿ ನೀಡಿ ವಿಮೆ ಮಾಡಿಸಿದರು.