ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಯುವ ಮೋರ್ಚಾದ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಶಾಲೆಗಳ ಮೈದಾನದಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ಶಾರದೋತ್ಸವ , ಮೊಸರು ಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆಗೆ ಕೋಮು ದ್ವೇಷ ಮನಸ್ಥಿತಿಯ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಡ್ಡಗಾಲು ಹಾಕಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನೆ ತಾಲೂಕು ಕಚೇರಿ ಮುಂಭಾಗದಲ್ಲಿ ಜು.22 ರಂದು ನಡೆಯಿತು.ಪ್ರತಿಭಟನಾಕಾರರು ಸುತ್ತೋಲೆಯನ್ನು ವಾಪಸ್ ಪಡೆಯಬೇಕು ಎಂದು ತಹಶೀಲ್ದಾರ್ ಪ್ರಥ್ವಿ ಸಾನಿಕಂ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಸಂಕೇತಿಕವಾಗಿ ಭಜನೆ ನಡೆಸುವುದರ ಮೂಲಕ ಪ್ರತಿಭಟನೆ ನಡೆಸಿದರು. ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ರೈತಮೋರ್ಚ ಅಧ್ಯಕ್ಷ ವಿಜಯ್ ಗೌಡ, ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಕಾಶ್ ಕಡಮಾಜೆ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸಹಿತ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಪ್ರಮುಖರು ಭಾಗವಹಿಸಿದ್ದರು. ವಿನೀತ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.