Site icon Suddi Belthangady

ಕಾಶಿಪಟ್ಣ: ಗ್ರಾಮ ಪಂಚಾಯತ್ ಗ್ರಾಮ ಸಭೆ

ಕಾಶಿಪಟ್ಣ: ಕಾಶಿಪಟ್ಣ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ಇವರ ಅದ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ನಿರ್ದೇಶಕ ಬೆಳ್ತಂಗಡಿ ತೋಟಗಾರಿಕಾ ಇಲಾಖೆಯ ಚಂದ್ರಶೇಖರ್ ಭಾಗವಹಿಸಿ ಸಭೆಯನ್ನು ನಡೆಸಿಕೊಟ್ಟರು.

ಸಭೆಯಲ್ಲಿ ಉಪಾಧ್ಯಕ್ಷೆ ಶುಭವಿ, ಗ್ರಾಮ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಹೆಚ್ ಸ್ವಾಗತಿಸಿ, ಜಮಾ ಖರ್ಚಿನ ವಿವರ ನೀಡಿದರು.ಕಾರ್ಯದರ್ಶಿ ಲೀನಾ ಬೆನೆಡಿಕ್ಟಾ ಲೋಬೊ ಅನುಪಾಲನಾ ವರದಿ ಮಂಡಿಸಿದರು. ಗ್ರಾಮ ಸಭೆಯಲ್ಲಿ ತಾಲೂಕಿನ ಇಲಾಖಾಧಿಕಾರಿಗಳು ಇಲಾಖೆಯಿಂದ ಸಿಗುವ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು.

Exit mobile version