Site icon Suddi Belthangady

ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ , ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ತರಬೇತಿ- ಒಂದೇ ಸೂರಿನಡಿಯಲ್ಲಿ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ- ಕಳೆದ ಸಾಲಿನ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯಲ್ಲಿ ಅಕಾಡಮಿಗೆ ಶೇ. 100 ಫಲಿತಾಂಶ- 2023ರ ನವೋದಯ ಶಾಲಾ ಪ್ರವೇಶ ಪರೀಕ್ಷೆಯಲ್ಲಿ ಜಿಲ್ಲೆಗೆ 2 ನೇ ಸ್ಥಾನ ಪಡೆದಿದ್ದ ಅಕಾಡೆಮಿಯ ವಿದ್ಯಾರ್ಥಿ

ಪುತ್ತೂರು: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಅಧೀನಕ್ಕೆ ಒಳಪಟ್ಟಿರುವ ನವೋದಯ ಶಾಲಾ ಪ್ರವೇಶ ಪರೀಕ್ಷೆ ಹಾಗೂ ಸೈನಿಕ ಶಾಲಾ ಪರೀಕ್ಷೆ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯು ಪೂರ್ವ ತಯಾರಿ ತರಬೇತಿಯನ್ನು ಪ್ರಾರಂಭಿಸಿದ್ದು, ಸದ್ಯ ಸರಕಾರವು ಕೇವಲ 6ನೇ ತರಗತಿಯ ಪ್ರವೇಶಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಬಿಸಿರುತ್ತದೆ.

ಎಲ್ಲಾ ವಸತಿ ಶಾಲೆಗಳ 6ನೇ ಮತ್ತು 9ನೇ ತರಗತಿಯ ಪ್ರವೇಶಾತಿಯನ್ನು ಬಯಸುವ ವಿದ್ಯಾರ್ಥಿಗಳು ವಿದ್ಯಾಮಾತಾ ಅಕಾಡೆಮಿಯ ಈ ತರಬೇತಿಯ ಸೌಲಭ್ಯವನ್ನು ಪಡೆದುಕೊಳ್ಳಲು ಸಂಸ್ಥೆಯ ಕೇಂದ್ರ ಕಚೇರಿಯಾದ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಹಾಗೂ ಸಂಸ್ಥೆಯ ಸುಳ್ಯ ಶಾಖೆಯನ್ನು ಸಂಪರ್ಕಿಸಿ ತಕ್ಷಣವೆ ದಾಖಲಾತಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಕಳೆದ ಸಾಲಿನಲ್ಲಿ ಶೇ.100 ಪಲಿತಾಂಶ ದಾಖಲಿಸಿದ್ದ ಸಂಸ್ಥೆ: 2023ನೇ ಸಾಲಿನಲ್ಲಿ ನಡೆದ ನವೋದಯ/ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ಪೂರಕವಾಗಿ ತರಬೇತಿಯನ್ನು ನೀಡಿದ್ದ ವಿದ್ಯಾಮಾತಾ ಅಕಾಡೆಮಿ ನವೋದಯ ಶಾಲಾ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದ ಸಂಸ್ಥೆಯ ವಿದ್ಯಾರ್ಥಿ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದು ಗಮನಿಸಬೇಕಾದ ಅಂಶ.ಅದೇ ರೀತಿ ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗುವ ಮೂಲಕ ತನ್ನ ಮೊದಲ ತರಬೇತಿಯಲ್ಲೇ ಶೇ. 100 ಫಲಿತಾಂಶ ಪಡೆಯುವ ಮೂಲಕ ಅಮೋಘ ಸಾಧನೆ ಮಾಡುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿರುವುದು ಸಂಸ್ಥೆಯ ಯಶಸ್ಸಿಗೆ ಹಿಡಿದ ಕೈಗನ್ನಡಿಯಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಕೆಳಗಿನ ಆಯ್ಕೆ ಪ್ರಕ್ರಿಯೆಯು 6ನೇ ತರಗತಿಯ ಪ್ರವೇಶಕ್ಕೆ ಮಾತ್ರ ಸೀಮಿತವಾಗಿದ್ದು,ಉಳಿದ ಶಾಲೆಗಳ ಪ್ರವೇಶಕ್ಕೆ ಸಂಬಂದಿಸಿದ ಅರ್ಹತೆಗಳು ಆಯಾ ವಸತಿ ಶಾಲಾ ಆಯ್ಕೆ ಪ್ರಕ್ರಿಯೆ ಪ್ರಾರಂಬಿಸುವ ಸಂದರ್ಭದಲ್ಲಿ ಪ್ರಕಟಿಸುವ ಅದಿಸೂಚನೆಯಲ್ಲಿ ಪ್ರಕಟಗೋಳ್ಳುತ್ತದೆ.

ಅರ್ಜಿ ಸಲ್ಲಿಕೆಗೆ ಕೊನೆ ದಿನ ಸೆಪ್ಟೆಂಬರ್ 16:

Exit mobile version