

ಬೆಳ್ತಂಗಡಿ: ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ 22ನೇ ವಾರ್ಷಿಕ ಸಭೆ ಜು.23ರಂದು ಗುರುವಾಯನಕೆರೆ ಛಾಯಾ ಭವನದಲ್ಲಿ ನಡೆಯಿತು.ಎಸ್ ಕೆ ಪಿ ಎ ಬೆಳ್ತಂಗಡಿ ವಲಯದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೆರೋ ಅಧ್ಯಕ್ಷತೆ ವಹಿಸಿದ್ದರು.
ಸಭೆಯ ಉಧ್ಘಾಟನೆಯನ್ನು ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ನೇರವೆರಿಸಿದರು.
ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ರಮೇಶ್ ಕಲಾಶ್ರೀ, ಜಿಲ್ಲಾ ಕೋಶಾಧಿಕಾರಿ ನವೀನ್ ರೈ ಪಂಜಳ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರಧ್ವಜ್, ಜಿಲ್ಲಾ ಸಹಕಾರಿ ಸಂಘದ ನಿರ್ದೇಶಕ ವಿಲ್ಸನ್ ಜಾರ್ಚ್ ಗೊನ್ಸಾಲ್ವಿಸ್, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ.ವಸಂತ ಶರ್ಮ, ವಲಯದ ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ ಉಪಸ್ಥಿತರಿದ್ದರು.
ಬೆಳ್ತಂಗಡಿ ವಲಯದ ಸ್ಧಾಪಕಾಧ್ಯಕ್ಷ ಪಾಲಾಕ್ಷ ಸುವರ್ಣ ಪ್ರಾಸ್ತಾವಿಕವಾಗಿ ಮಾತಾನಾಡಿದರು.ವಲಯದ ಪ್ರಧಾನ ಕಾರ್ಯದರ್ಶಿ ವಿಜಯ ಹೆಚ್ ಪ್ರಸಾದ್ ವರದಿ ಮಂಡಿಸಿ, .ಕೋಶಾಧಿಕಾರಿ ಹರೀಶ್ ಕೊಳ್ತಿಗೆ ಲೆಕ್ಕಪತ್ರ ಮಂಡಿಸಿ, ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆಗೈದರು. ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿ, ಕೆ.ವಿ ವಸಂತ್ ಶರ್ಮ ದನ್ಯವಾದ ವಿತ್ತರು.