ಧರ್ಮಸ್ಥಳ: ಕ.ಜಾ.ಪರಿಷತ್ತು ಕರ್ನಾಟಕ ದ.ಕ ಜಿಲ್ಲಾ ಬೆಳ್ತಂಗಡಿ ಘಟಕ ಪದಗ್ರಹಣ ಸಮಾರಂಭ ಜು.21ರಂದು ಧರ್ಮಸ್ಥಳ ನೇತ್ರಾವತಿ ಬಳಿಯ ಪ್ರಣವ್ ಸಭಾಂಗಣದಲ್ಲಿ ನಡೆಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆ ಐಟಿ ಮತ್ತು ಹಾಸ್ಟೆಲ್ ಆಡಳಿತದ ಸಿಇಒ ಪೂರಣ್ ವರ್ಮ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತಾನಾಡುತ್ತ ಜನಪದ ಕಲೆಗಾಗಿಯೇ ಹುಟ್ಟಿಕೊಂಡ ಹಲವಾರು ಸಂಸ್ಥೆಗಳು ಕಲಾವಿದರು ಇರಬಹುದು, ವಿದ್ಯಾರ್ಥಿಗಳು ಆಗಿರಬಹುದು ಎಲ್ಲಾ ಜನಾಂಗಕ್ಕೂ ಅಗತ್ಯವೆಣಿಸುವ ಕಾರ್ಯಕ್ರಮಗಳನ್ನು ಮಾಡುವುದರಿಂದ ಇನ್ನಷ್ಟು ಜಾನಪದ ಉಳಿವಿಗೆ ಒತ್ತು ನೀಡಿದಂತಾಗುತ್ತದೆ ಮತ್ತು ನಮ್ಮ ಸಂಸ್ಕೃತಿಯನ್ನು ಬೆಳೆಸಿದಾಂತಗುತ್ತದೆ ಎಂದು ಹೇಳಿದರು.
ಬೆಳ್ತಂಗಡಿ ತಾಲೂಕು ಘಟಕ ಇನ್ನಷ್ಟು ಜಾನಪದ ಬಗ್ಗೆ ಉತ್ತೇಜಿಸುವ ಕಾರ್ಯ ಮಾಡುತ್ತಿರಲಿ ಹಾಗೂ ಕಲಾವಿದರನ್ನು ಮಕ್ಕಳನ್ನು ನಿರ ಆಮಂತ್ರಣ ಪರಿವಾರದ ಎಲ್ಲಾ ಚಟುವಟಿಕೆಗಳಿಗೂ ಶಿಕ್ಷಣ ಸಂಸ್ಥೆ ಸಂಪೂರ್ಣ ಸಹಕರಿಸುವ ಭರವಸೆಯನ್ನು ಪೂರಣ್ ವರ್ಮ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗುರುವಾಯನಕೆರೆ ಪ್ರತಿಷ್ಠಿತ ಸಂಸ್ಥೆಯಾಗಿ ರಾಜ್ಯದಲ್ಲಿ ಹೆಸರು ಪಡೆದ ಎಕ್ಸೆಲ್ ಶಿಕ್ಷಣ ಸಂಸ್ಥೆ ಚಯರ್ ಮೆನ್ ಸುಮಂತ್ ಕುಮಾರ್ ಜೈನ್ ಇವರಿಗೆ ಆಮಂತ್ರಣ ಶಿಕ್ಷಣರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.
ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಹಾಗೂ ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಇವರ ಸಹಕಾರದೊಂದಿಗೆ ಅತೀ ಕಡಿಮೆ ಅವಧಿಯಲ್ಲಿ ರಾಜ್ಯದ ಉತ್ತಮ ಶಿಕ್ಷಣ ಸಂಸ್ಥೆಯಾಗಿ ಹೆಸರು ಪಡೆದ ಸಂಸ್ಥೆಯಾಗಿ ಎಲ್ಲರೊಂದಿಗೆ ಬೆರೆಯುವ ಸಾಂಸ್ಕೃತಿಕವಾಗಿ ಹಾಗೂ ಎಲ್ಲಾ ರಂಗದ ಕಾರ್ಯಕ್ರಮಗಳ ಆಯೋಜನೆಯೊಂದಿಗೆ ನಿಸ್ವಾರ್ಥ ಸೇವೆಯ ಭಾವನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.
ದ.ಕ. ಜಿಲ್ಲಾ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷ ಪ್ರವೀಣ್ ಕೊಡಿಯಾಲ್ ಬೈಲ್, ಪದಪ್ರಧಾನ ನೆರವೇರಿಸಿದರು. ಪ್ರಣವ್ ಸಭಾಂಗಣದ ಮಾಲಕರಾದ ಸುರೇಂದ್ರ ಪ್ರಭು, ಮುಖ್ಯ ಅತಿಥಿಗಳಾಗಿ ಮಾತಾನಾಡಿದರು.ಹಿರಿಯರಾದ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ಪರಿವಾರ ಸಮೂಹ ಸಂಸ್ಥೆಗಳ ಮುಖ್ಯಸ್ಥ ವಿಜಯ ಕುಮಾರ್ ಜೈನ್, ಕಿರಣ್ ಶೆಟ್ಟಿ ಬೆಳ್ತಂಗಡಿ, ಮಲ್ಲಿನಾಥ್ ಜೈನ್, ಕ.ಜಾ.ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕ.ಜಾ.ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀದೇವಿ ಸಚಿನ್ ಮುಂಡ್ರುಪ್ಪಾಡಿ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ, ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಬೇಬಿ ಪೂಜಾರಿ ಪುಣ್ಕೆತ್ಯಾರು, ಶಾರದಾ ಶೆಟ್ಟಿ ಅಳದಂಗಡಿ, ರಂಜನ್ ನೆರಿಯ, ಅರುಣ್ ಅಳದಂಗಡಿ, ಆಮಂತ್ರಣ ಸಾಂಸ್ಕೃತಿಕ ವೇದಿಕೆಯ ಪ್ರಧಾನ ಸಂಚಾಲಕ ಅಭಿಷೇಕ್ ಬಜಗೋಳಿ, ಅಧ್ಯಕ್ಷೆ ನಿರೀಕ್ಷಿತಾ ಮಂಗಳೂರು, ವಿದ್ಯಾಶ್ರೀ ಅಡೂರ್, ಸ್ವಾತೀ ಸೂರಜ್ ಶಿಶಿಲ, ಶಾಲಿನಿ ಕೆಮ್ಮಣ್ಣು, ಕವಿತಾ ದಿನೇಶ್ ಕಟೀಲು, ಲಾಲಿತ್ಯ ಕುಮಾರ್ ಬೇಲೂರು, ಪ್ರಕಾಶ್ ಶೆಟ್ಟಿ ಧರ್ಮಸ್ಥಳ, ಆಶಾ ಅಡೂರು, ಗಣಪತಿ ಭಟ್ ಕುಳವರ್ಮ, ಹೆಚ್ಕೆ ನಯನಾಡು ಮುಂತಾದವರು ಉಪಸ್ಥಿತರಿದ್ದರು.
ನಿನಾದ ಕ್ಲಾಸಿಕಲ್ ಇವರು ಪ್ರಾರ್ಥಿಸಿದರು.ಪ್ರಧಾನ ಸಂಚಾಲಕಿ ಕಾವ್ಯಶ್ರೀ ಅಜೇರು ಸ್ವಾಗತಿಸಿದರು.ಆಮಂತ್ರಣ ಸಮೂಹ ಸಂಸ್ಥೆಗಳ ವಿಜಯ ಕುಮಾರ್ ಜೈನ್ ಅಳದಂಗಡಿ ಪ್ರಸ್ತಾವಿಸಿದರು.ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಆಶಾ ಕಾರ್ಯಕ್ರಮ ನಿರ್ವಹಿಸಿದರು.