Site icon Suddi Belthangady

ಕಳಿಯ: ಪ.ಜಾತಿ- ಪ.ಪಂ ಕುಟುಂಬಗಳಿಗೆ ಗ್ರಾಮ ಪಂಚಾಯತ್ ನಿಂದ ಫ್ಯಾನ್ ವಿತರಣಾ ಕಾರ್ಯಕ್ರಮ

ಕಳಿಯ ಗ್ರಾಮ ಪಂಚಾಯತ್ ಸ್ವಂತ ನಿಧಿ ಅನುದಾನದಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದವರಿಗೆ ಗ್ರಾಮ ಪಂಚಾಯತ್ ನಿಂದ ಫ್ಯಾನ್ ವಿತರಣೆ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ ಅವರು ಅಧ್ಯಕ್ಷತೆ ವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಂಚಾಯತ್‌ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ, ಹಾಗೂ ಪಂಚಾಯತ್‌ ಸದಸ್ಯರು ಉಪಸ್ಥಿತರಿದ್ದರು.

ಪಂಚಾಯತ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ ರವರು ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಪಂಚಾಯತಿಯಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ್ದರು. ಕಾರ್ಯದರ್ಶಿ ಕುಂಜ ಸ್ವಾಗತಿಸಿ ಧನ್ಯವಾದವಿತ್ತರು., ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Exit mobile version