ಕುಕ್ಕೇಡಿ: ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತಿನ 2024-25ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆ ಜು. 24ರಂದು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಕೆ.ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸಭೆಯನ್ನು ಮುನ್ನಡೆಸಿದರು.

ಪಂಚಾಯತ್ ಉಪಾಧ್ಯಕ್ಷೆ ಕುಸುಮ ಪಂಚಾಯತ್ ಸದಸ್ಯರುಗಳಾದ ಜನಾರ್ದನ ಪೂಜಾರಿ, ಗೋಪಾಲ ಶೆಟ್ಟಿ, ಧನಂಜಯ, ಗೀತಾ, ತೇಜಾಕ್ಷಿ, ಗುಣವತಿ ಡಿ., ರಜನಿ, ದಿನೇಶ್ ಮೂಲ್ಯ, ಪವಿತಾ,ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.

ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಅನುಪಾಲನಾ ವರದಿ, ಪ್ರಗತಿ ವರದಿ ವಾಚಿಸಿದರು, ಸಿಬ್ಬಂದಿ ಆನಂದ ಸ್ವಾಗತಿಸಿದರು.

LEAVE A REPLY

Please enter your comment!
Please enter your name here