ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್‌ನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹಾಗೂ 15ನೇ ಹಣಕಾಸು ಯೋಜನೆಯ 2024-25ನೇ ಸಾಲಿನ
ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ ಅಧ್ಯಕ್ಷತೆಯಲ್ಲಿ ಜು.22ರಂದು ನಡೆಯಿತು.
ವಿಶೇಷ ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ನಿರ್ದೇಶಕರು ಪ್ರಧಾನಮಂತ್ರಿ ಪೋಷಣೆ ಶಕ್ತಿ ನಿರ್ಮಾಣ್, ತಾಲೂಕು ಪಂಚಾಯತ್, ಬೆಳ್ತಂಗಡಿ ಇವರು ಭಾಗವಹಿಸಿದ್ದರು. ಗ್ರಾಮಸ್ಥರು ಈ ವಿಶೇಷ ಗ್ರಾಮಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಸಭೆಯ ಸದುಪಯೋಗ ಪಡೆದುಕೊಂಡರು.
ಉಪಾಧ್ಯಕ್ಷೆ ಶಾಲಿನಿ, ಪಂ.ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಜೆ., ಸಹಾಯಕ ಲೆಕ್ಕಾಧಿಕಾರಿ ಪೂವಪ್ಪ ಮಲೆಕುಡಿಯ ಹಾಗೂ ಸರ್ವಸದಸ್ಯರು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
p>