ಅಳದಂಗಡಿ: ಪೋಕ್ಸೊ ಕಾಯ್ದೆ 2021ನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಹಾಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿಯಲ್ಲಿ ಜು.24ರಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಶ್ರೀಶೈಲಾ ಮುರುಗೋಡು ಇವರು ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಬಗ್ಗೆ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ತಿಳಿಸಿದರು.
ನಂತರ ವೇಣೂರು ಪೊಲೀಸ್ ಠಾಣೆಯ ಅಳದಂಗಡಿ ಬೀಟ್ ಪೊಲೀಸರಾದ ನಝೀರ್ ವಿದ್ಯಾರ್ಥಿಗಳೊಂದಿಗೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ಸಂವಾದ ನಡೆಸಿದರು ಶಾಲಾ ಮುಖ್ಯೋಪಾಧ್ಯಾಯ ನಾಬರ್ಟ್ ವಿನ್ಸೆಂಟ್ ಪೌಲ್ ರವರು ಅಧಿಕಾರಿಗಳು ನೀಡಿದ ಮಾಹಿತಿಯನ್ನು ಪಾಲಿಸಬೇಕೆಂದು ತಿಳಿಸಿದರು.
ವೇಣೂರು ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ರಾಜೇಶ್ ಹಾಗೂ ಸತ್ಯಪ್ರಕಾಶ್ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಸಹ ಶಿಕ್ಷಕಿ ವಿಶಾಲಾಕ್ಷಿ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ಧನ್ಯವಾದವಿತ್ತರು.ಶಿಕ್ಷಕ ಹಾಗೂ ಶಿಕ್ಷಕೇತರ ವರ್ಗದವರು ಸಹಕರಿಸಿದರು.