Site icon Suddi Belthangady

ಮುಂಡಾಜೆ: ಸೀಟು ಬಳಿ ಬೈಕ್-ಬೊಲೆರೋ ಅಪಘಾತ: ಬೈಕಿನಲ್ಲಿದ್ದ ಬಾಲಕಿ ಸಾವು

ಮುಂಡಾಜೆ :ಮುಂಡಾಜೆ ಸೀಟು ಬಳಿ ಬೈಕ್ ಬೊಲೆರೋ ಅಪಘಾತದಲ್ಲಿ ನಾಲ್ಕನೇ ತರಗತಿ ಬಾಲಕಿ ಮೇಲೆ ಬೊಲೆರೋ ಹರಿದು ಮೃತಪಟ್ಟಿದೆ. ಮುಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಬಾಲಕಿ ಅನರ್ಘ್ಯ ಉಜಿರೆಯಿಂದ ಮನೆಗೆ ಹೊರಟಿದ್ದರು. ಮಾರ್ಗ ಮಧ್ಯ ಬೊಲೆರೋ ಹಿಂದಿನಿಂದ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಅನರ್ಘ್ಯ (9) ಗಂಭೀರ ಗಾಯಗೊಂಡು ತಂದೆಗೆ ಗಾಯವಾಗಿದೆ. ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಬಾಲಕಿ ಜೀವನ್ಮರಣ ಸ್ಥಿತಿಯಲ್ಲಿದ್ದು, ಬಳಿಕ ಮೃಪಟ್ಟಿರುವುದಾಗಿ ತಿಳಿದುಬಂದಿದೆ. ಅನರ್ಘ್ಯ ಉಜಿರೆ ಎಸ್‌ಡಿಎಂ ಶಾಲೆಯ 4 ನೇ ತರಗತಿ ವಿದ್ಯಾರ್ಥಿನಿ.ಅಪಘಾತವಾದ ಬಳಿಕ ತಪ್ಪಿಸಿಕೊಂಡಿದ್ದ ಬೊಲೆರೋ ವಾಹನವನ್ನು ಸಾರ್ವಜನಿಕರ ಸಹಕಾರದಿಂದ ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ.

Exit mobile version