ಪಿಲ್ಯ: ಗುಡ್ ಫ್ಯೂಚರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ -ರಕ್ಷಕ ಸಂಘದ ಸಭೆ

0

ಪಿಲ್ಯ : ಗುಡ್ ಫ್ಯೂಚರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ -ರಕ್ಷಕ ಸಂಘದ ಸಭೆಯು ಶಾಲೆಯ ಸಭಾಂಗಣದಲ್ಲಿ ಶಾಲಾ ಸಂಚಾಲಕ ನಝಿರ್ ಅಹಮ್ಮದ್ ಖಾನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ಶಾಜೀ ಕುರಿಯನ್, ಉಪಾಧ್ಯಕ್ಷ ಎನ್. ವೀರೇಂದ್ರ ಕುಮಾರ್ ಜೈನ್, ಹರೀಣಾಕ್ಷಿ ಪಿಲ್ಯ, ಶಾಲಾ ಮುಖ್ಯೋಪಾಧ್ಯಯ ಮೇಲ್ವಿನ್ ಇವರುಗಳು ಸಂದರ್ಭೋಚಿತವಾಗಿ ಮಾತನಾಡಿ ಕೆಲವೊಂದು ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

ವೇದಿಕೆಯಲ್ಲಿ ಸಮಿತಿಯ ಸದಸ್ಯ ಧನಕೀರ್ತಿ ಜೈನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಫೈಝುನ್ ನಿರೂಪಿಸಿ, ಸರ್ವಾಣಿ ಸ್ವಾಗತಿಸಿ, ಶಾಲಾ ಮುಖ್ಯೋಪಾಧ್ಯಯರು ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here