Site icon Suddi Belthangady

ವೇಣೂರು: ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ- ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವೇಣೂರು: ಠಾಣಾ ವ್ಯಾಪ್ತಿಯಲ್ಲಿ ಜುಲೈ 27ರಂದು ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ವೇಣೂರು ಪೊಲೀಸರು ಬೇಧಿಸಿದ ಘಟನೆ ತಾಲೂಕಿನ ಕರಿಮಣೇಲು ಗ್ರಾಮದ ಚರ್ಚ್ ಕ್ರಾಸ್ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ.ವೇಣೂರು ಠಾಣಾ ಇನ್ಸ್ಪೆಕ್ಟರ್ ಶ್ರೀಶೈಲ್ ಡಿ ಮುರಗೋಡು ಅವರ ನೇತೃತ್ವದ ಪೊಲೀಸರು ತಪಾಸಣೆಗಾಗಿ ಪಿಕಪ್ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ ಚಾಲಕ ವಾಹನ ನಿಲ್ಲಿಸದೇ ನಾರಾವಿ ರಸ್ತೆ ಕಡೆ ಹೋಗಿದ್ದು, ಸದ್ರಿ ವಾಹನವನ್ನು ಪೊಲೀಸರು ಹಿಂಬಾಲಿಸಿದಾಗ ಆರೋಪಿ ಚಾಲಕ ಮೂಡುಕೋಡಿ ಗ್ರಾಮದ ಕೊಪ್ಪದ ಬಾಕಿಮಾರು ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ವಾಹನ ಬಿಟ್ಟು ಪರಾರಿಯಾಗಿದ್ದಾನೆ.

ಸದ್ರಿ ಪಿಕಪ್ ವಾಹನವನ್ನು ಪೊಲೀಸರು ಪರಿಶೀಲನೆ ನಡೆಸಿದಾಗ ಅದರಲ್ಲಿ ನಂಬರ್ ಪ್ಲೇಟ್ ತೆಗೆದಿದ್ದು, ಒಂದು ದನವನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಮುಂದಿನ ಕಾನೂನು ಕ್ರಮಕ್ಕಾಗಿ ವಾಹನ ಹಾಗೂ ಜಾನುವಾರನ್ನು ಸ್ವಾದೀನಪಡಿಸಿಕೊಂಡು ವೇಣೂರು ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 63/2024 ಕಲಂ 4, 5, 7, 12 ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 ಮತ್ತು ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆ-1960 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Exit mobile version