ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯು 28ರಂದು ಬೆಳ್ತಂಗಡಿ ಶ್ರೀ ಧ.ಮಂ.ಕಲಾ ಸಭಾಂಗಣದಲ್ಲಿ ನಡೆಯಿತು. ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ಶಾಸಕ ಹರೀಶ್ ಪೂಂಜ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸಿ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟರಿಗೆ ಮಂಡಲದ ಪರವಾಗಿ ಸನ್ಮಾನಿಸಲಾಯಿತು. ಬಳಿಕ ಅವರು ಮಾತಾಡಿ ಕೇಂದ್ರದಿಂದ ಸಾಧ್ಯವಾದಷ್ಟು ಅನುದಾನ ತರಲು ಪ್ರಯತ್ನಿಸುತ್ತೇನೆ ಸದಾ ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಮಂಡಲದಲ್ಲಿ ಹೆಚ್ಚು ಅಂತರ ಬಂದ ಧರ್ಮಸ್ಥಳ ಮಹಾಶಕ್ತಿ ಕೇಂದ್ರವನ್ನು ಅಭಿನಂದಿಸಿದರು. ಹೆಚ್ಚು ಅಂತರ ಬಂದ ಬೂತ್ ಚಾರ್ಮಾಡಿ 21, ಉಜಿರೆ 95, ಮಲವಂತಿಗೆ 16, ಬಂದಾರು 219, ಮೊಗ್ರು 235 ಇದರ ಬೂತ್ ಅಧ್ಯಕ್ಷರುಗಳನ್ನು ಗೌರವಿಸಲಾಯಿತು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ತಿಲಕ್ ರಾಜ್, ಹರಿಕೃಷ್ಣ ಬಂಟ್ವಾಳ್, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ನಾವೂರು, ಮಾಜಿ ಶಾಸಕ ಪ್ರಭಾಕರ ಬಂಗೇರ ಉಪಸ್ಥಿತರಿದ್ದರು.
ಮಹಾಶಕ್ತಿ ಕೇಂದ್ರಗಳ ವರದಿಯನ್ನು ಮಂಡಲ ಪ್ರದಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ತೆಗೆದುಕೊಂಡರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವರ್ ಸಂಘಟನಾತ್ಮಕ ಮಾಹಿತಿ ನೀಡಿದರು.
ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿದರು. ಮಂಡಲದ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ವಂದೇ ಮಾತರಂ ಹಾಡಿದರು.ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬಿ.ಎಸ್.ಬಿಜೆಪಿ ಗೀತೆ ಹಾಡಿದರು. ಮಂಡಲದ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ವಂದಿಸಿದರು.