ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

0

ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.27ರಂದು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಾ.ತೋಮಸ್ ಪುಲ್ಲಾಟ್ ಇವರು ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಸಂಚಾಲಕಿ ಸಿಸ್ಟರ್.ಎಲ್ಸಿ ಪಾಲಾಟ್, ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ ಜಾರ್ಜ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರೆಜಿ ಜಾರ್ಜ್ ಹಾಗೂ ಶಿಕ್ಷಕ ಕಾರ್ಯದರ್ಶಿ ಮಮತಾ ಇವರು ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ ಜಾರ್ಜ್ ಇವರು ಆಗಮಿಸಿದ ಎಲ್ಲಾ ಗಣ್ಯರನ್ನು ಸ್ವಾಗತಿಸಿದರು. ಶಾಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಹಾಗೆಯೇ ಉಳಿದೆಲ್ಲಾ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.

ಈ ಶೈಕ್ಷಣಿಕ ಸಾಧನೆಯನ್ನು ಕೊಂಡಾಡಿ ಜಗನ್ನಾಥ್, ಸಹಶಿಕ್ಷಕರು ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಅವರು ಪೋಷಕರ ಪರವಾಗಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಸಭೆಯಲ್ಲಿ 2023-24ನೇ ಸಾಲಿನ ವಿದ್ಯಾರ್ಥಿಗಳು ಹಾಗೂ ಪೋಷಕರು, ಶಿಕ್ಷಕ -ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ವರ್ನನ್ ಮೆಂಡೋನ್ಸಾ ಹಾಗೂ ರೂಪಲತಾ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.ಕುಸುಮಾ ಇವರು ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here