ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹದಿಹರೆಯದ ಆರೋಗ್ಯ ಮಾಹಿತಿ ಕಾರ್ಯಕ್ರಮ ಜರಗಿತು.
ಮಾಹಿತಿದಾರರಾಗಿ ಆಗಮಿಸಿದ ಶಿಕ್ಷಣ ಇಲಾಖೆಯ ಬಿ.ಐ.ಆರ್.ಟಿ. ಸೀತಾ ಆರ್.ಶೇಟ್ ಮಾತನಾಡುತ್ತಾ, ಹದಿಹರೆಯದ ವಯಸ್ಸು ಅಂದರೆ ಕನಸು ಕಾಣುವ ಸಮಯ. ದೈಹಿಕ ಮಾನಸಿಕ ವಿಕಾಸ ಹೊಂದುವ ಈ ವಯಸ್ಸಿನಲ್ಲಿ ಮನೋನಿಯಂತ್ರಣದ ಅಗತ್ಯವಿದೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಅಭಿರುಚಿಗಳನ್ನು ಬೆಳೆಸಿಕೊಳ್ಳಬೇಕು, ಗುರಿ ಇಟ್ಟುಕೊಂಡು ಅಧ್ಯಯನ ಮಾಡಬೇಕು ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.
ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕ ಶಿಕ್ಷಕಿ ಕೋಕಿಲಾ ಸ್ವಾಗತಿಸಿ ವಂದಿಸಿದರು.