

ಉಜಿರೆ: ಕಿರಿಯಾಡಿ ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ, ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ ನಡೆಯುವ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಬಗ್ಗೆ ಪೂರ್ವಭಾವಿ ಸಭೆ ಜು.28ರಂದು ಭಜನಾ ಮಂಡಳಿಯ ಅಧ್ಯಕ್ಷ ವಿಠಲ ನಾಯ್ಕ ಇವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ಅರ್ಚಕ ಕೃಷ್ಣಮೂರ್ತಿ ಹೊಳ್ಳ ಇವರ ಗೌರವ ಉಪಸ್ಥಿತಿಯಲ್ಲಿ ನಡೆಯಿತು.
ಭಜನಾ ಮಂಡಳಿಯ ಪದಾಧಿಕಾರಿಗಳು ಗೌರವ ಸದಸ್ಯರು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ಪ್ರತಿ ವರ್ಷದಂತೆ ಸೆ.1ರಂದು ಆಚರಿಸುವುದೆಂದು ತೀರ್ಮಾನಿಸಲಾಯಿತು.
ಭಜನಾ ಮಂಡಳಿಯ ಕಾರ್ಯದರ್ಶಿ ಗಿರೀಶ್ ಸ್ವಾಗತಿಸಿ, ಕೋಶಾಧಿಕಾರಿ ರಮೇಶ್ ವಂದಿಸಿದರು.ಶೈಲೇಶ್ ಧರಣಿ ಕಾರ್ಯಕ್ರಮ ನಿರೂಪಿಸಿದರು.