Site icon Suddi Belthangady

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮ ಸಭೆ

ಪಟ್ರಮೆ: ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ. ಅಧ್ಯಕ್ಷ ಮನೋಜ್ ರವರ ಅಧ್ಯಕ್ಷತೆಯಲ್ಲಿ ಜು.30ರಂದು ಪಟ್ರಮೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಕಾರ್ಯತಡ್ಕ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಯಾಕೂಬ್ ವಹಿಸಿದ್ದರು.ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಮೋಹಿನಿ, ಗ್ರಾ.ಪಂ. ಸದಸ್ಯರಾದ ಯತೀಶ್ ಕುಮಾರ್, ಗಿರಿಜಾ.ಬಿ, ಜಿ.ಕೆ ಮೀನಾ ಕುಮಾರಿ, ಕೆ.ರಾಜೇಶ್ ರೈ ಇಲಾಖಾಧಿಕಾರಿಗಳು ಇಲಾಖೆ ಮಾಹಿತಿ ನೀಡಿದರು.

ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಕಂದಾಯ ಇಲಾಖೆ, ಪಶುಸಂಗೋಪನೆ ಇಲಾಖೆ ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮ್ಮಿ ಬಿ.ಪಿ ಸ್ವಾಗತಿಸಿ, ವಾರ್ಡ್ ಸಭೆಗಳಲ್ಲಿ ಬಂದ ಪ್ರಸ್ತಾವನೆಗಳನ್ನು ಓದಿದರು. ಸಿಬ್ಬಂದಿ ಲೋಕೇಶ್ ವರದಿ ವಾಚಿಸಿದರು.

Exit mobile version