ಇಂದಬೆಟ್ಟು: ಜುಲೈ 30ರಂದು ವಿಪರೀತವಾಗಿ ಸುರಿದ ಭಾರಿ ಮಳೆಗೆ ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ ಉಂಟಾಗಿದೆ.
ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಅವರ ಕುಟುಂಬಸ್ಥರು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅರ್ಚಕರ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.
ಸ್ಥಳಕ್ಕೆ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿ, ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಭೇಟಿ ನೀಡಿ ಪರಿಶೀಲನೆ ನಡೆಸಿದರು.