ಮಲವಂತಿಗೆ: ಮಲವಂತಿಗೆ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷ ಪ್ರಕಾಶ್ ರವರ ಅಧ್ಯಕ್ಷತೆಯಲ್ಲಿ ಜು.31ರಂದು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಜರುಗಿತು.
ಮಾರ್ಗದರ್ಶಕ ಅಧಿಕಾರಿಯಾಗಿ ಪಶುಆಸ್ಪತ್ರೆ ಪಶುಸಂಗೋಪನೆ ಮತ್ತು ಪಶುವೈದ್ಯರು ಬೆಳ್ತಂಗಡಿ ಡಾ.ರವಿಕುಮಾರ್ ಎಂ ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ರೋಹಿಣಿ, ಗ್ರಾ.ಪಂ. ಸದಸ್ಯರಾದ ಕೆ.ಯು ಮಹಮ್ಮದ್, ದಿನೇಶ್ ಗೌಡ, ಸುಂದರ ಪೂಜಾರಿ, ಅರುಣಾ, ಪವಿತ್ರ, ಅನಿತಾ.ಕೆ ವಿವಿಧ ಇಲಾಖಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.
ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಸರಕಾರದ ವಿವಿಧ ಯೋಜನೆಗಳ ಬಗ್ಗೆ ಗ್ರಾಮಸ್ಥರಿಂದ ಅರ್ಜಿಯನ್ನು ಸ್ವೀಕರಿಸಲಾಯಿತು. ಹಾಗೂ ಗ್ರಾಮದ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು.
ನಾಡಗೀತೆ ಹೇಳಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ.ಪಿ ಜಮಾ -ಖರ್ಚು ಹಾಗೂ ವಾರ್ಡ್ ಸಭೆಯಲ್ಲಿ ಬಂದ ಪ್ರಸ್ತಾವನೆಗಳನ್ನು ಓದಿದರು. ಅನುಪಾಲನಾ ವರದಿ ವಾಚಿಸಿ ಕಾರ್ಯಕ್ರಮನ್ನು ಸ್ವಾಗತಿಸಿ, ನಿರೂಪಿಸಿದರು.