

ಬೆಳ್ತಂಗಡಿ: ರಾಜ್ಯ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲು ನಿರ್ಧರಿಸಿರುವ ‘ಭ್ರಷ್ಟ ಮುಖ್ಯಮಂತ್ರಿ ಹಾಗು ಸರ್ಕಾರದ ವಿರುದ್ಧ’ ನಡೆಯಲಿರುವ ಮೈಸೂರ್ ಚಲೋ ಪಾದಯಾತ್ರೆಯ ಪೂರ್ವಭಾವಿಯಾಗಿ ಬೆಂಗಳೂರು ಭಾರತೀಯ ಜನತಾ ಪಾರ್ಟಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಬಿಜೆಪಿ ರಾಜ್ಯ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಹರೀಶ್ ಪೂಂಜರವರು ಭಾಗವಹಿಸಿದರು.