ಬೆಳ್ತಂಗಡಿ: ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಬೆಳ್ತಂಗಡಿಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮದ್ದಡ್ಕ-ಪಡಂಗಡಿ ರಸ್ತೆಯ ಸೇತುವೆ ಕುದ್ರಾಜೆಯಲ್ಲಿ ಮುರಿದು ಬಿದ್ದ ಪ್ರದೇಶಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಈ ವೇಳೆ ಸುದ್ದಿಗೆ ಜಿಲ್ಲಾಧಿಕಾರಿ ಯವರು ವಿಶೇಷ ಸಂದರ್ಶನ ನೀಡಿ, ಹಾನಿಗೊಳಗಾದ ಮನೆಗಳಿಗೆ ಪರಿಹಾರ, ಡಿಗ್ರಿ ಮಕ್ಕಳಿಗೆ ಯಾಕೆ ರಜೆಯಿಲ್ಲ ಎಂಬ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ, ತಹಶೀಲ್ದಾರ್ ಪೃಥ್ವಿ ಸಾನಿಕಂ, ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಮುಂತಾದವರು ಜೊತೆಗಿದ್ದರು.
ಇದನ್ನು ಸುದ್ದಿ ನ್ಯೂಸ್ ಬೆಳ್ತಂಗಡಿ ಯೂ ಟ್ಯೂಬ್ ವಾಹಿನಿಯಲ್ಲಿ ವೀಕ್ಷಿಸಬಹುದಾಗಿದೆ.