Site icon Suddi Belthangady

ಭಾರಿ ಮಳೆಯಿಂದಾಗಿ ನಡ ಗ್ರಾಮದಲ್ಲಿ ಹಲವು ಪ್ರದೇಶಗಳಲ್ಲಿ ಹಾನಿಯಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಭೇಟಿ

ನಡ: ಭಾರಿ ಮಳೆಯಿಂದಾಗಿ ನಡ ಗ್ರಾಮದ ಪುತ್ಯೆ ಎಂಬಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ ಹಾಗೂ ಬಾಳೆಹಿತ್ಲು, ಗುರಿಪಳ್ಳ ಸಂಪರ್ಕ ರಸ್ತೆ, ಕೆಳಗಿನ ಸುರ್ಯ ಹಾಗೂ ಸುರ್ಯ ಬಳಿ ಮನೆಗಳು ಹಾನಿಗೊಳಗಾಗಿದ್ದು, ಸ್ಥಳಕ್ಕೆ ಆಗಸ್ಟ್ 02ರಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಲಾಯಿತು.

ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version