Site icon Suddi Belthangady

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

ಕೊಕ್ಕಡ: ಪಟ್ರಮೆ ಗ್ರಾಮದ ಪಾದೆ ಎಂಬಲ್ಲಿ ಭಾರಿ ಮಳೆಯಿಂದಾಗಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಆ.02ರಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ ನೀಡಲಾಯಿತು.

ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ., ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ.ಬಿ, ಕೊಕ್ಕಡ ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ನಿಕಟ ಪೂರ್ವಾಧ್ಯಕ್ಷ ಯೋಗೀಶ್ ಆಲಂಬಿಲ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version