ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

0

ಧರ್ಮಸ್ಥಳ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಆ.03ರಂದು ನಡೆಯಿತು.ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ಶಾಲೆಯ ಒಳಭಾಗಕ್ಕೆ ಹೋದಾಗ ಮೂಲೆ ಮೂಲೆಯಲ್ಲೂ ತುಳುನಾಡುಗೆ ಸಂಬಂಧಪಟ್ಟಂತ ವಿವಿಧ ಭಕ್ಷ ಭೋಜ್ಯ, ಆಟಿಯಲ್ಲಿ ಆಡುವಂತಹ ವಿಶೇಷ ಆಟಗಳು ರಾರಾಜಿಸುತ್ತಿದ್ದವು. ಡ್ರಾಮಾಭಿವೃದ್ಧಿ ಯೋಜನೆ, ಧರ್ಮಸ್ಥಳ ಇದರ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಮಹಾವೀರ ಜೈನ್ ಅಜಿಲ ಈ ಕಾರ್ಯಕ್ರಮವನ್ನು ಚೆನ್ನೆಮಣೆ ಆಡುವುದರ ಮುಖಾಂತರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ತುಳುನಾಡಿನ ಕಲೆ ಸಂಸ್ಕೃತಿ ಸಂಸ್ಕಾರ ಆಚಾರ ವಿಚಾರ ಆಹಾರ ಆರೋಗ್ಯ ಆಟಿ ದಿನಗಳಲ್ಲಿ ಹೇಗೆ ಕಾಯ್ದುಕೊಳ್ಳಬೇಕು ಎಂಬಿತ್ಯಾದಿ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತುಳುವಿನಲ್ಲಿ ತಿಳಿಯಪಡಿಸಿದರು. ಕಮುಖ್ಯ ಅತಿಥಿಗಳಾಗಿ ಧರ್ಮಸ್ಥಳದ ಸಾಂಸ್ಕೃತಿಕ ಚಟುವಟಿಕೆಗಳ ಸಂಯೋಜಕ ಭುಜಬಲಿ ಬಿ. ಶುಭ ಹಾರೈಸಿದರು.

ವಿದ್ಯಾರ್ಥಿಗಳು ವಿಶೇಷ ಕಾಳಜಿ ವಹಿಸಿ ತುಳು ನಾಡಿಗೆ ತುಳುವ ಭಾಷೆಗೆ ಸಂಬಂಧಪಟ್ಟಂತಹ ಹಾಡು ಗಾದೆ ಸಂಧಿ ಪಾಡ್ದನ, ನೃತ್ಯ, ಬಿತ್ತಿ ಪತ್ರಿಕೆ, ಔಷಧೀಯ ಸಸ್ಯಗಳ ಪ್ರದರ್ಶನ ಇತ್ಯಾದಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಆಟಿ ತಿಂಗಳಿನ ತಿನಿಸುಗಳ ಪ್ರದರ್ಶನವನ್ನು ಹಾಗೂ ದೇಸಿ ಆಟಗಳನ್ನು ಸಹ ಏರ್ಪಡಿಸಲಾಗಿತ್ತು. ಧರ್ಮಸ್ಥಳದ ಜ್ಞಾನವಿಕಾಸ ಯೂಟ್ಯೂಬ್ ಚಾನೆಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪೂಜಾ ಪಕ್ಕಳ ಸಂದೀಪ್ ಭಾಗವಹಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.ತದನಂತರ ವಿದ್ಯಾರ್ಥಿಗಳು ಕೆಸರಿನಲ್ಲಿ ವಿವಿಧ ನೃತ್ಯ ಪ್ರದರ್ಶಿಸಿದರು.

ಅತಿಥಿಗಳು ಮಿಂಚಿಯನ್ನು ಶಾಲಾ ಪರಿಸರ ಸಂಘಕ್ಕೆ ಹಸ್ತಾಂತರಿಸಿದರು.ಒಟ್ಟಾರೆಯಾಗಿ ಶಾಲೆಯು ತುಳುನಾಡಿನ ವರ್ಣನೆಯನ್ನು ಬಿಂಬಿಸುತ್ತಿತ್ತು. ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾಗಿರುವ ಕುಮಾರಿ ಧನ್ಯ,ಕ್ಷಮಾ, ಶ್ರೇಯಾ ರೈ ಹಾಗೂ ಹಿತ ನಿರ್ವಹಿಸಿದರು.

ವಿದ್ಯಾರ್ಥಿಗಳು ತಮ್ಮ ನಾಟಕ ಹಾಗೂ ನೃತ್ಯದ ಮುಖಾಂತರ ಬಂದಂಥ ಅತಿಥಿಗಳನ್ನು ವಿಭಿನ್ನವಾಗಿ ಸ್ವಾಗತಿಸಿದರು. ಶಾಲಾ ಮುಖ್ಯ ಉಪಾಧ್ಯಾಯಿನಿ ಪರಿಮಳ ಎಂ.ವಿ ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.ಶಾಲಾ ಶಿಕ್ಷಕರು ಶಿಕ್ಷಕೇತರ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here