ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ 30ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರ್ಷ ಸಂಪಿಗೆತ್ತಾಯ ಇವರು ಬಿಡುಗಡೆಗೊಳಿಸಿದರು.
ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ಅಧ್ಯಕ್ಷ ನಾರಾಯಣ ಪೂಜಾರಿ, ಕಾರ್ಯದರ್ಶಿ ನಿಶಾಂತ್ ಬಳ್ಳಮಂಜ, ಗೌರವ ಸಲಹೆಗಾರರಾದ ಪ್ರಮೋದ್ ಕುಮಾರ್, ಹರ್ಷ ಬಳ್ಳಮಂಜ, ಲ್ಯಾನ್ಸಿ ಪಾಯ್ಸ್, ಉಪಾಧ್ಯಕ್ಷರಾದ ಅವಿನಾಶ್, ಪುನೀತ್ ಶೆಟ್ಟಿ, ಕೋಶಾಧಿಕಾರಿ ಶ್ರವಣ್, ಕ್ರೀಡಾ ಕಾರ್ಯದರ್ಶಿ ವಿನೀತ್ ಕುಮಾರ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.