







ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತಿನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.6ರಂದು ಪಂಚಾಯತ್ ವಠಾರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತ ಇಲಾಖೆಯ ನಿರ್ದೇಶಕ ಜೋಸೆಫ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.


ಪಂಚಾಯತ್ ಉಪಾಧ್ಯಕ್ಷೆ ವಸಂತಿ, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ ಸ್ವಾಗತಿಸಿದರು. ಕಾರ್ಯದರ್ಶಿ ತಾರಾನಾಥ ನಾಯ್ಕ ಕೆ. ವರದಿ ವಾಚಿಸಿದರು. ಸಿಬ್ಬಂದಿಗಳು ಸಹಕರಿಸಿದರು. ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.









