Site icon Suddi Belthangady

ತಾಲೂಕು ಮಟ್ಟದ ಕರಾಟೆ ಪಂದ್ಯಾಟ- ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪಿಲ್ಯ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಫವಾಝ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ ಹಾಗೂ ಶೆರ್ವಿನ್ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ.

ಈ ವಿದ್ಯಾರ್ಥಿಗಳಿಗೆ ಕರಾಟೆ ಶಿಕ್ಷಕ ಅಬ್ದುಲ್ ರಹಿಮಾನ್ ಶಿಹಾನ್ ರವರು ತರಬೇತಿ ನೀಡಿರುತ್ತಾರೆ. ಇವರಿಗೆ ಶಾಲಾ ಸಂಚಾಲಕ ನಸೀರ್ ಅಹಮದ್ ಖಾನ್, ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷ ಶಾಜಿ ಕುರಿಯನ್, ಉಪಾಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಕರು ಸಂಪೂರ್ಣ ಪ್ರೋತ್ಸಾಹ ನೀಡಿರುತ್ತಾರೆ.

Exit mobile version