


ನೇತ್ರಾವತಿ: ಧರ್ಮಸ್ಥಳ ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಹಲವಾರು ವರ್ಷ ಚಾಲಕ ಆಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ನೇತ್ರಾವತಿಯ ವೆಂಕಪ್ಪ ಗೌಡ (73 ವ) ಆಗಸ್ಟ್ 5ರಂದು ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ.


ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.ಇವರು ಪತ್ನಿ ಗಿರಿಜಾ ಮತ್ತು ಮಕ್ಕಳು, ಮೊಮ್ಮಕ್ಕಳು, ಸಹೋದರ ಸಹೋದರಿಯರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.









