


ಮಂಜೊಟ್ಟಿ: ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಂಜೊಟ್ಟಿ ರಝಾ ಗಾರ್ಡನ್ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಮೂರು ವಿದ್ಯಾರ್ಥಿಗಳೂ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


17ರ ವಯೋಮಾನದ ಬೇರೆ ಬೇರೆ ವಿಭಾಗದಲ್ಲಿ ಸ್ಪರ್ಧೆಯಲ್ಲಿ 9ನೆಯ ತರಗತಿಯ ಮಹಮ್ಮದ್ ಶರೀಫ್ ಶಮ್ಮಾಝ್, ಮಹಮ್ಮದ್ ಶಿಹಾಬುದ್ದೀನ್, ಮೊಹಮ್ಮದ್ ಹಫೀಝ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲಾ ಆಡಳಿತ ಮಂಡಳಿಯ ಪ್ರಶಂಸೆಗೆ ಪಾತ್ರರಾಗಿದ್ದಾರೆ.









