Site icon Suddi Belthangady

ಉಜಿರೆ: ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜು ಎನ್.ಎಸ್.ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

ಉಜಿರೆ: ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ ಆ.5ರಂದು ಜರಗಿತು.

ಈ ಕಾರ್ಯಕ್ರಮವನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜುನ ಎನ್ ಎಸ್ ಎಸ್ ನ ಹಳೇ ವಿದ್ಯಾರ್ಥಿಗಳಾದ ಭರತ್, ಸಾಯಿ ಕಿರಣ್ ಹಾಗೂ ಭರತ್ ಇವರು ನೆರವೇರಿಸಿಕೊಟ್ಟರು ಹಾಗೂ ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ, ಎನ್ ಎಸ್ ಎಸ್ ನ ಧ್ಯೇಯ ಹಾಗೂ ಮಹತ್ವ ಹಾಗೂ ವಿವಿಧ ರೀತಿಯ ಚಟುವಟಿಕೆಗಳನ್ನು ಮಾಡಿಸಿದರು.

ಈ ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿ ಪ್ರಕಾಶ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಮತ್ತು ಎನ್ ಎಸ್ ಎಸ್ ನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Exit mobile version