Site icon Suddi Belthangady

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2ಕೆ24 ಐಟಿ ಫೆಸ್ಟ್ ಸಮಾರೋಪ

ಬೆಳ್ತಂಗಡಿ: ವಿದ್ಯಾರ್ಥಿಗಳು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉನ್ನತ ಸಾಧನೆಯನ್ನು ಮಾಡಬಹುದು ಎಂದು ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ ಹೇಳಿದರು.ಅವರು ವಾಣಿ ಪದವಿಪೂರ್ವ ಕಾಲೇಜಿನ ಕಂಪ್ಯೂಟರ್ ಸೈನ್ಸ್ ನ ಐಟಿ ಕ್ಲಬ್ ಆಶ್ರಯದಲ್ಲಿ ಜರುಗಿದ ಕ್ವಾಟ್ರಿಕ್ಸ್-2ಕೆ24 ಐಟಿ ಫೆಸ್ಟ್ ನ ಸಮರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನವನ್ನು ವಿತರಿಸಿ ಮಾತನಾಡುತ್ತಾ, ಸ್ಪರ್ಧಾತ್ಮಕ ಯುಗದಲ್ಲಿ ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯನ್ನು ಉಂಟುಮಾಡುತ್ತದೆ.ಈ ಮೂಲಕ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಾಗುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಐಟಿ ಕ್ಲಬ್ ನ ಅಧ್ಯಕ್ಷ ಪವನ್ ರಾಜ್ ಉಪಸ್ಥಿತರಿದ್ದರು.

ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಸ್ವಾಗತಿಸಿದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಸುಧೀರ್ ಕೆಎನ್ ಧನ್ಯವಾದ ಅರ್ಪಿಸಿದರು. ಕುಮಾರಿ ಅನುಷ್ಕಾ ಅನುಕ್ಷಾ ಹಾಗೂ ಉಜ್ವಲ್ ಕಾರ್ಯಕ್ರಮ ನಿರೂಪಿಸಿದರು.

ಸುದರ್ಶನ್ ನಾಯಕನಾಗಿದ್ದ ಫಾಸ್ಟ್ ಎಕ್ಸ್ ತಂಡವು ಪ್ರಥಮ ಸಮಗ್ರ ಪ್ರಶಸ್ತಿಯನ್ನು ಮತ್ತು ಸ್ವರ ಹೆಡ್ಡೆ ನಾಯಕಿಯಾಗಿರುವ ಬ್ರೈಟ್ ಬೈಟ್ಸ್ ತಂಡವು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

Exit mobile version