Site icon Suddi Belthangady

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಸಿ.ಎ ಅಶ್ವಥ, ಸಿ.ಎ ಸುಕನ್ಯ ಕಾಮತ್, ಸಿ.ಎ ಕೇಶವ ಕಾಮತ್ ಮತ್ತು ಸಿ.ಎ ಮೇಘೇಶ್ ಇವರು ಪ್ರಸಕ್ತ ವರ್ಷದಲ್ಲಿ ಅಖಿಲ ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ ನಡೆಸಿದ ಅಂತಿಮ ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸಾಧಕ ವಿದ್ಯಾರ್ಥಿಗಳು ಗುರಿ, ಪರಿಶ್ರಮದಿಂದ ಸಾಧನೆಯನ್ನು ಮಾಡಬಹುದು ಅದೇ ರೀತಿ ಸೋತಾಗ ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಸಿ.ಎ. ಆಕಾಂಕ್ಷಿಗಳಿಗೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ ಇವರು ಶುಭಹಾರೈಸಿದರು.ವಿವಿಧ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ದ್ವಿತೀಯ ಪಿಯುಸಿಯ ಭಾರ್ಗವಿ ನಿರೂಪಿಸಿ, ಕೃತಿ ವಂದಿಸಿದರು.

Exit mobile version