ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ವಿಭಾಗ ಮಂಗಳೂರು, ಪ್ರಾಥಮಿಕ ಅರೋಗ್ಯ ಕೇಂದ್ರ ವೇಣೂರು ಹಾಗೂ ವಿವಿಧ ಸಂಘ ಸಂಸ್ಥೆ ಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ 51ನೇ ಕಾರ್ಯಕ್ರಮ ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಎಂಬ ಕಾರ್ಯಕ್ರಮ ಯೋಜನೆ ಯಡಿಯಲ್ಲಿ “ಉಚಿತ ನೇತ್ರ ತಪಾಸಣಾ ಶಿಬಿರ” ಆ.7ರಂದು ಕುಕ್ಕೇಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಪಂಚಾಯತ್ ಅಧ್ಯಕ್ಷೆ ಅನಿತಾ ಕೆ. ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಕುಸುಮ ಎ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಅರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯ ಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಜಗನ್ನಾಥ ದೇವಾಡಿಗ ಸ್ವಾಗತಿಸಿ, ಪಂಚಾಯತ್ ಸಿಬ್ಬಂದಿ ಆನಂದ ವಂದಿಸಿದರು.
p>