Site icon Suddi Belthangady

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ರೋಟರಿ ಸಭಾಭವನ ಕಾಶಿಬೆಟ್ಟು ಲಾಯಿಲಾದಲ್ಲಿ ಆಗಸ್ಟ್ 6 ರಂದು ನಡೆಯಿತು.

14 ವಯೋಮಾನದ ಕೆಳಗಿನ ವಿದ್ಯಾರ್ಥಿಗಳಿಗೆ ನಡೆದ ಪಂದ್ಯಾಟದಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ತ್ರಿಶಾ ನಿಕೋಲ್ (6ನೇ), ಶರ್ಲಿನ್ ಪಿಂಟೋ (7ನೇ) ಮತ್ತು ಕೃತಿಕಾ ಪೈ (7ನೇ) ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಮತ್ತು ತ್ರಿಶಾ ನಿಕೋಲ್ ಅತ್ಯುತ್ತಮ ಆಟಗಾರ್ತಿಯಾಗಿ ಕೀರ್ತಿಗಳಿಸಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ತರಬೇತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯ ವಂ.ಫಾ.ಕ್ಲಿಫರ್ಡ್ ಪಿಂಟೋರವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Exit mobile version