


ಬೆಳ್ತಂಗಡಿ: ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಎನ್.ಎಸ್.ಯು.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆ ಸಮಾರಂಭ ಆ.5ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿದ್ಯಾರ್ಥಿ ಸಂಘಟನೆಯ ಬಗ್ಗೆ ಮಾತನಾಡಿ ಇಂತಹ ಸಂಘಟನೆಗಳಿಂದಾಗಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಲು ಇದು ಸಹಕಾರಿಯಾಗಿದೆ, ಈ ವಿದ್ಯಾರ್ಥಿ ಸಂಘಟನೆಯ ತಾಲೂಕು ಮಟ್ಟದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವಂತಹ ಸಮಸ್ಯೆಗಳನ್ನು ಬಗೆಹರಿಸಿ ಇನ್ನು ಹೆಚ್ಚಿನ ಮಟ್ಟದಲ್ಲಿ ಈ ಸಂಘಟನೆಯು ಬೆಳೆಯಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಅತಿಥಿಯಾಗಿ ಆಗಮಿಸಿದಂತಹ ಎನ್ ಎಸ್ ಯು ಐ ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವಾ ಕಾರ್ಯಕ್ರಮದ ಬಗ್ಗೆ ಮಾತನಾಡಿ ಇಂದು ವಿದ್ಯಾರ್ಥಿಗಳು ಎದುರಿಸುತ್ತಿರುವಂತಹ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳಲು ಈ ಎನ್ ಎಸ್ ಯು ಐ ಸಂಘಟನೆಯು ಸುಲಭವಾಗಿದೆ ಎಂದು ತಿಳಿಸಿದರು ಈ ಸಂಘಟನೆಯಿಂದಾಗಿ ಜಿಲ್ಲಾ ಮಟ್ಟದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಲು ಇದು ಸುಲಭವಾದ ಮಾರ್ಗವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು.ನೂತನ ಅಧ್ಯಕ್ಷರಾಗಿ ದೀವಿತ್ ದೇವಾಡಿಗ, ಉಪಾಧ್ಯಕ್ಷಾರಾಗಿ ಜೋಶಿಲ್ ಆಂಟೋನಿ ಫೆರ್ನಾಂಡಿಸ್, ಸಲ್ಮಾನ್ ಫಾರಿಷ್ ಹಾಗೂ ಮಹಿಳಾ ಉಪಾಧ್ಯಕ್ಷರಾಗಿ ಅಜ್ವಿನಾ, ಪ್ರಧಾನ ಕಾರ್ಯದರ್ಶಿಯಾಗಿ ಭರತ್, ಮನಸ್, ಮೊಹಮ್ಮದ್ ಉಬೈಬ್, ಕಾರ್ಯದರ್ಶಿಯಾಗಿ ಕೀರ್ತನ್ ಶೆಟ್ಟಿ, ರೋನ್ಸನ್ ಕ್ರ್ಯಾಸ್ತಾ, ಅಕ್ಷತ್ ಶೆಟ್ಟಿ, ಮೋಹಿತ್, ಅಶ್ಮಿದ್ ಅಲಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ಸೌರವ್ ಬಲ್ಲಾಳ್, ದಕ್ಷಿಣ ಕನ್ನಡ ಜಿಲ್ಲಾ ಎನ್ ಎಸ್ ಯು ಐ ನ ಉಪಾಧ್ಯಕ್ಷರಾದ ಸುಖವಿಂದರ್ ಸಿಂಗ್, ಎನ್ ಎಸ್ ಯು ಐ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಭಾತೀಷ್ ಅಳಕೆಮಜಲು, ತನುಷ್ ಎಂ ಶೆಟ್ಟಿ ಹಾಗೂ ಯತೀಶ್ ಧರ್ಮಸ್ಥಳ ಮೊದಲಾದ ಗಣ್ಯರು ಉಪಸ್ಥಿತರಿದ್ದರು.









