Site icon Suddi Belthangady

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಪ್ರಥಮ ಸ್ಥಾನ

ಮಡಂತ್ಯಾರು: ಪುಂಜಾಲಕಟ್ಟೆ ಮತ್ತು ಗುರುವಾಯನಕೆರೆ ವಲಯಗಳ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಯೋಜಕತ್ವದಲ್ಲಿ ಆಗಸ್ಟ್ 7ರಂದು ಸೇಕ್ರೆಡ್ ಹಾರ್ಟ್ ಒಳ ಕ್ರೀಡಾಂಗಣದಲ್ಲಿ ನಡೆಯಿತು.

ಈ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 14ರ ವಯೋಮಾನದ  ಪ್ರಾಥಮಿಕ ಹಂತದ ಬಾಲಕರ ವಿಭಾಗದಲ್ಲಿ 6ನೇ ತರಗತಿಯ ವಿದ್ಯಾರ್ಥಿಗಳಾದ ಜೇವಿಸ್ ಡಿಕುನ್ಹಾ, ಜೀತನ್ ಸಿಕ್ವೇರಾ, ಜಿಯಾನ್ ಸಿಕ್ವೇರಾ ಹಾಗೂ 7ನೇ ತರಗತಿಯ ವಿದ್ಯಾರ್ಥಿಗಳಾದ ಎಲ್ಟನ್ ಡಿ’ಸೋಜ, ಚಿರಾಯು ರವೀಂದ್ರ ಪೂಜಾರಿ ಇವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ  14ರ ವಯೋಮಾನದ  ಪ್ರಾಥಮಿಕ ಹಂತದ ಬಾಲಕಿಯರ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳಾದ ಆದ್ಯ ಜೆ, ಸುಶ್ಮಿತಾ ಶೆಣೈ, ಅನ್ಯ ಪಿ ಜೈನ್, ಫ್ಲಾವಿಟ ಲಿವಿಯ ಡಿಸೋಜ, ನಿಶೆಲ್ ರಿಯೋನ ಡಿಸೋಜ ಇವರು ಭಾಗವಹಿಸಿ ಪ್ರಥಮ  ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿ’ಸೋಜ ಮತ್ತು ಮಂಜುನಾಥರವರು ತರಬೇತಿಯನ್ನು ನೀಡಿರುತ್ತಾರೆ.

Exit mobile version