ಉಜಿರೆ: ಉಜಿರೆ ಬದುಕು ಕಟ್ಟೋಣ ಬನ್ನಿ ತಂಡ, ರೋಟರಿ ಕ್ಲಬ್ ಬೆಳ್ತಂಗಡಿ, ಎಸ್.ಡಿ.ಎಂ.ಕಾಲೇಜು ಎನ್.ಎಸ್.ಎಸ್ ಘಟಕ, ತಾಲೂಕು ಪತ್ರಕರ್ತರ ಸಂಘ ಮತ್ತಿತರರು ಸಂಘಟನೆಗಳ ಜಂಟಿ ಆಶ್ರಯದಲ್ಲಿ ಆ.18ರಂದು ಉಜಿರೆ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಕೆ.ಮೋಹನ್ ಕುಮಾರ್ ಅವರು ಆ.8ರಂದು ಉಜಿರೆಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
5 ವರ್ಷಗಳ ಹಿಂದೆ ಚಾರ್ಮಾಡಿಯಲ್ಲಿ ನಡೆದ ನೆರೆ ಪ್ರವಾಹದ ಸಂದರ್ಭದಲ್ಲಿ ಹಾನಿಯಾದ ಕುಟುಂಬದವರ ಬದುಕು ನಿರ್ಮಾಣಕ್ಕೆ ಹುಟ್ಟಿದ ಬದುಕು ಕಟ್ಟೋಣ ಬನ್ನಿ ತಂಡ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಇತರ ಸಂಘಟನೆಯೊಂದಿಗೆ ನಡೆಸುತ್ತಿದ್ದು ಆ.18ರಂದು ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಇದರಲ್ಲಿ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನದ ಕುರಿತು ಪ್ರೇರಣೆ ನೀಡುವ ಕಾರ್ಯ ಮಾಡಲಾಗುವುದು.
ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ ಮಾತನಾಡಿ ಈ ಬಾರಿ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದ ಕೊರತೆ ಇದ್ದು ಇಂತಹ ಶಿಬಿರದ ಮೂಲಕ ರಕ್ತದಾನದ ಬಗ್ಗೆ ಪ್ರೇರಣೆ ನೀಡುವ ಕೆಲಸ ಮಾಡಲಾಗುವುದು ಎಂದರು.ಪತ್ರಿಕಾಗೋಷ್ಠಿಯಲ್ಲಿ ಎಸ್.ಡಿ.ಎಂ ಕಾಲೇಜು ಎನ್.ಎಸ್.ಎಸ್ ಘಟಕದ ಮುಖ್ಯಸ್ಥ ಮಹೇಶ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ, ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಮಾಜಿ ಕಾರ್ಯದರ್ಶಿ ಶ್ರೀಧರ ಕೆ.ವಿ., ಉಪಸ್ಥಿತರಿದ್ದರು.