Site icon Suddi Belthangady

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ಕರಾಟೆ ಸ್ಪರ್ಧೆಯು ಆಗಸ್ಟ್ 5ರಂದು ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ  ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 17ರ ವಯೋಮಾನದ 9ನೇ ತರಗತಿಯ ವಿದ್ಯಾರ್ಥಿಯಾದ ಫ್ಲಾಯಿಡ್ ಮಿಸ್ಕಿತ್ ರವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ 9ನೇ ತರಗತಿಯ ಮಹಮ್ಮದ್  ಹಾಫಿಲ್, 8ನೇ ತರಗತಿಯ ಶೇಕ್ ಮಹಮ್ಮದ್ ಅಮಾನ್ ರವರು  ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

7ನೇ ತರಗತಿಯ ವಿದ್ಯಾರ್ಥಿನಿಯಾದ ರಿತ ಕೆ, 6ನೇ ತರಗತಿಯ ವಿದ್ಯಾರ್ಥಿಯಾದ ರಿಷಿತ್, 10ನೇ ತರಗತಿಯ ವಿದ್ಯಾರ್ಥಿಯಾದ ಶ್ರೇಯಸ್ ಎಮ್ ರವರು ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರಿಗೆ ಕರಾಟೆ ತರಬೇತುದಾರ ವಸಂತ ಬಂಗೇರರವರು ತರಬೇತಿಯನ್ನು ನೀಡಿರುತ್ತಾರೆ ಹಾಗೂ ನಮ್ಮ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ಸಹಕಾರ ನೀಡಿರುತ್ತಾರೆ.

Exit mobile version