ಇಂದಬೆಟ್ಟು: ಗ್ರಾಮ ಪಂಚಾಯತಿನ 2024-2025ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.8ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷೆ ಆಶಾಲತಾರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ರವರು ನಡೆಸಿಕೊಟ್ಟರು. ದೇವನಾರಿ ಶಾಲಾ ಮಕ್ಕಳು ನಾಡಗೀತೆ ಹಾಡಿದರು, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ, ನಿಕಟಪೂರ್ವ ಅಧ್ಯಕ್ಷ ಅನಂದ ಅಡಿಲು, ಪಂಚಾಯತ್ ಸದಸ್ಯರಾದ ಪ್ರಮೋದ್ ಕುಮಾರ್, ಶ್ರೀಕಾಂತ್ ಎಸ್ ಇಂದಬೆಟ್ಟು, ವೀರಪ್ಪ ಮೊಯ್ಲಿ, ಸುಮಿತ್ರಾ, ಹರಿಣಾಕ್ಷಿ, ಸೌಮ್ಯ, ಜಯಂತಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಗ್ರಾಮದ ಅಭಿವೃದ್ಧಿಗಾಗಿ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಶ್ಮಿ ರವರು ಜಮಾ ಖರ್ಚಿನ ವಿವರ ಮಂಡಿಸಿದರು. ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ಸ್ವಾಗತಿಸಿ, ವರದಿ ಮಂಡಿಸಿದರು. ರಾಷ್ಟ್ರಗೀತೆಯೊಂದಿಗೆ ಗ್ರಾಮ ಸಭೆಯನ್ನು ಮುಕ್ತಾಯಗೊಂಡಿತ್ತು.