Site icon Suddi Belthangady

ನಾರ್ಯ ಪೊದಿಂಬಿಲ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಎರ್ಮುಂಜ ಬೈಲ್ ನಾರ್ಯ ಇಲ್ಲಿ ದೇವರಿಗೆ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.
ದೇವಸ್ಥಾನದ ಆಡಳಿತ ಮಂಡಳಿಯ ಮೊಕೇಸರರು, ಸದಸ್ಯರು, ದೇವಸ್ಥಾನದ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ತರು ಭಾಗಿಯಾದರು.
ಕ್ಷೇತ್ರದಲ್ಲಿ ಊರ ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.
ಪ್ರತಿ ತಿಂಗಳು ಸಂಕ್ರಾಂತಿಯಂದು ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮವು ನಡೆಯಲಿರುವುದು ಭಕ್ತಾದಿಗಳು ಭಾಗವಹಿಸಬೇಕು ಎಂದು ಕ್ಷೇತ್ರದ ಆಡಳಿತ ಮಂಡಳಿ ತಿಳಿಸಿದೆ.

Exit mobile version