Site icon Suddi Belthangady

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಆ. 9ರಿಂದ 15ರ ವರೆಗೆ ಸಂಜೆ 6ರಿಂದ 8ರ ವರೆಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ವೀಣಾ ಬನ್ನಂಜೆ ಇವರಿಂದ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ ನಡೆಯಲಿದ್ದು ಉದ್ಘಾಟನಾ ಸಮಾರಂಭ ಆ.9ರಂದು ಜರಗಿತು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ಶರತ್ ಕೃಷ್ಣ ಪಡ್ವೇಟ್ನಾಯ ದೀಪ ಬೆಳಗಿಸಿ ಉದ್ಘಾಟಿಸಿದರು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಸಂಘಟಿನೆ ಮಾಡಿದ ಹಿರಿಯ ವಾಹನ ನೀರಿಕ್ಷಕ ಚರಣ್ ಕುಮಾರ್ ಉಪಸ್ಥಿತರಿದ್ದರು. ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರು ನಿಕಟ ಪೂರ್ವ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕ ಶ್ರೀಶ ಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಸುಧಾ ರಮಾನಂದ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.

ಬೆಳ್ತಂಗಡಿ ರೋಟರಿ ಕ್ಲಬ್, ಉಜಿರೆಯ ಪ್ರಗತಿ ಮಹಿಳಾ ಮಂಡಲ, ತುಳು ಶಿವಳ್ಳಿ ಮಹಾ ಸಭಾ ಬೆಳ್ತಂಗಡಿ ತಾಲೂಕು, ಲಯನ್ಸ್ ಕ್ಲಬ್ ಬೆಳ್ತಂಗಡಿ, ಮುಗ್ಗ ಗುತ್ತು ಕುಟುಂಬಸ್ಥರ ಟ್ರಸ್ಟ್, ಬೆಳ್ತಂಗಡಿ ಮಂಜುಶ್ರೀ ಜೇಸಿಐ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮೊದಲಾದ ಸಂಸ್ಥೆಗಳು ಸಹಕಾರದಿಂದ ಶ್ರೀಮದ್ ಭಾಗವತ್ ಪ್ರವಚನ ಸಪ್ತಾಹ ಒಂದು ವಾರ ನಡೆಯಲಿದೆ.

Exit mobile version