Site icon Suddi Belthangady

ಕಕ್ಯಪದವು: ಎಲ್.ಸಿ.ಆರ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

ಕಕ್ಯಪದವು: ಎಲ್.ಸಿ.ಆರ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕ – ರಕ್ಷಕ ಸಭೆಯು ಆಗಸ್ಟ್ 10ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಂಸ್ಥೆಯ ಸಂಯೋಜಕ ಯಶವಂತ್ ಜಿ ನಾಯಕ್ ವಿದ್ಯಾರ್ಥಿಗಳ ಏಳಿಗೆಯಲ್ಲಿ ಪಾಲಕರ ಹಾಗೂ ಶಿಕ್ಷಕರ ಜವಾಬ್ದಾರಿ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಆದ್ದರಿಂದ ಪಾಲಕರು ಸಹ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು ಎಂದರು. ಹಾಗೂ ಸಂಸ್ಥೆಯಲ್ಲಿ ಇರುವ ಸೌಲಭ್ಯಗಳನ್ನು ಹೇಳಿದರು.ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ವಿಜಯ ಕೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಂಸ್ಥೆಯ ಕೆಲವು ನೀತಿ ನಿಯಮಾವಳಿಗಳನ್ನು ಹೇಳಿದರು.

ಸಂಸ್ಥೆಯ ಸಂಚಾಲಕ ಬಬಿತಾ ಆರ್ ನಾಥ್ ಹಾಗೂ ಕಾರ್ಯದರ್ಶಿ ಶಿವಾನಿ ಆರ್ ನಾಥ್ ರವರು ಪೋಷಕರಿಗೆ ಕೆಲವು ಕಿವಿ ಮಾತುಗಳನ್ನು ತಿಳಿಸಿದರು.ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ ಪೋಷಕರಿಗೆ ಕೆಲವು ಮಾಹಿತಿಯನ್ನು ಅಧ್ಯಕ್ಷೀಯ ನುಡಿಗಳೊಂದಿಗೆ ಹೇಳಿದರು.ಪ್ರಸ್ತಕ ವರ್ಷದಲ್ಲಿ ಸಂಸ್ಥೆಯಲ್ಲಿ ಪಾಠ ಭೋದಿಸುವ ಶಿಕ್ಷಕರನ್ನು ಪರಿಚಯಿಸಲಾಯಿತು.

ಪಾಲಕರ ಸಭೆಯಲ್ಲಿ ಪೂರ್ವ ಪ್ರಾಥಮಿಕ,ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಮಕ್ಕಳ ಪೋಷಕರು ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕ ವೃಂದ ಹಾಗೂ ಬೋಧಕೇತರ ವರ್ಗ ಉಪಸ್ಥಿತಿಯಲ್ಲಿದ್ದರು.

ಸಂಸ್ಥೆಯ ಸಹಶಿಕ್ಷಕ ಪ್ರಶಾಂತ್ ಸ್ವಾಗತಿಸಿ, ಸಹಶಿಕ್ಷಕಿಯರಾದ ಸೌಮ್ಯ ಬಿ.ಆರ್ ಮತ್ತು ಭವ್ಯ ಎಂ ಕಾರ್ಯಕ್ರಮ ನಿರೂಪಿಸಿ, ಸಹಶಿಕ್ಷಕಿ ಪ್ರತಿಮಾ ವಂದಿಸಿದರು.

Exit mobile version