Site icon Suddi Belthangady

ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಭಿನಂದನಾ ಸಮಾರಂಭ

ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾರಿಗೆ ಅಭಿನಂದನಾ ಸಮಾರಂಭ ಆ.11ರಂದು ಗುರುನಾರಾಯಣ ಸ್ಟಾಮಿ ಸೇವಾ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿ ನಗರ ಬ್ಲಾಕ್ ಅಧ್ಯಕ್ಷರಾದ ಸತೀಶ್ ಬಂಗೇರ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಜನ್ ಗೌಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಧರಣೇಂದ್ರ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ನಮಿತಾ, ಬ್ಲಾಕ್ ನಗರ ಮಹಿಳಾ ಘಟಕದ ಅಧ್ಯಕ್ಷೆ ವಂದನಾ ಪೂಜಾರಿ, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಅಭಿನಂದನ್, ಹಳ್ಳಿ ಮನೆ ಪ್ರವೀಣ್, ಕಾಂಗ್ರೆಸ್ ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಶೇಖರ್ ಕುಕ್ಕೇಡಿ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಜೋಕಿಂ ಡಿ’ಸೋಜಾ,ಕಾಂಗ್ರೆಸ್ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜೈಸನ್ ಪಟ್ಟೇರಿ, ಓಬಯ್ಯ, ಪ್ರಶಾಂತ್, ದಿಲೀಪ್ ದೇವಾಡಿಗ, ಅಬ್ದುಲ್ ರೆಹಮಾನ್, ಕಾಂಗ್ರೆಸ್ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ನಾಗೇಶ್ ಕುಮಾರ್ ಸ್ವಾಗತಿಸಿದರು.ಸಾಹುಲ್ ಹಮೀದ್ ಕೆ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಸತೀಶ್ ಬಂಗೇರ ಧನ್ಯವಾದಗೈದರು.

Exit mobile version