Site icon Suddi Belthangady

ಕೊಕ್ರಾಡಿಯಲ್ಲಿ ಯುವವಾಹಿನಿ ವೇಣೂರು ಘಟಕದ ಆಶ್ರಯದಲ್ಲಿ ಆಟಿದ ಗಮ್ಮತ್, ನಾಟಿ ವೈದ್ಯರಿಗೆ ಸನ್ಮಾನ

ಕೊಕ್ರಾಡಿ: ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ ವೇಣೂರು ಘಟಕ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಹಾಗೂ ನಾಟಿ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಆ.11ರಂದು ಕೊಕ್ರಾಡಿ ಬಿಲ್ಲವ ಸಂಘದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯಾ ವಹಿಸಿದ್ದರು. ಉದ್ಘಾಟನೆಯನ್ನು ಕೊಕ್ರಾಡಿ ಶ್ರೀ ಗು.ಸ್ವಾ.ಸೇ. ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ತಾಲೂಕು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಂ ಕೆ ಪ್ರಸಾದ್, ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರಿನ ಕಾರ್ಯದರ್ಶಿಗಳಾದ ಜಗದೀಶ್ಚಂದ್ರ ಡಿ.ಕೆ, ಶ್ರೀ ಗು.ನಾ.ಸ್ವಾ.ಸೇ.ಸಂಘ ವೇಣೂರು ವಲಯದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಊರ, ಕೇಂದ್ರ ಸಮಿತಿ ನಾಮನಿರ್ದೇಶಿತ ಸದಸ್ಯ ಸುರೇಶ್ ಪೂಜಾರಿ ಅಂಡಿಂಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಾಟಿ ವೈಧ್ಯೆ ಗುಲಾಬಿ, ಕಮಲ ಇವರನ್ನು ಸನ್ಮಾನಿಸಲಾಯಿತು. ಘಟಕದ ಸಲಹೆಗಾರ ರಾಕೇಶ್ ಕುಮಾರ್ ಮೂಡುಕೋಡಿ ಸನ್ಮಾನಿತರ ಪರಿಚಯ ಮಾಡಿದರು. ಘಟಕದ ನಿರ್ದೇಶಕ ಸುರೇಂದ್ರ ಕೋಟ್ಯಾನ್ ಪ್ರಾರ್ಥನೆ ನಡೆಸಿದರು. ಘಟಕದ ಸ್ಥಾಪಕಧ್ಯಕ್ಷ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಎಚ್. ಸ್ವಾಗತಿಸಿದರು. ಕಾರ್ಯದರ್ಶಿ ರಕ್ಷಿತ್ ಬಂಗೇರ ಅಂಡಿಂಜೆ ಧನ್ಯವಾದವಿತ್ತರು.ಘಟಕದ ಮಾಜಿ ಅಧ್ಯಕ್ಷ ಅರುಣ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿದರು. ವೇದಿಕೆಯಲ್ಲಿ ಕೊಕ್ರಾಡಿ ಕಾಲೇಜಿನ ಮಕ್ಕಳಿಂದ ಆಟಿ ಕಲೆಂಜ ನೃತ್ಯ ಪ್ರದರ್ಶನಗೊಂಡಿತು.

Exit mobile version