Site icon Suddi Belthangady

ಶಿಬಾಜೆ: ಪ್ರಥಮ ಸುತ್ತಿನ ಗ್ರಾಮಸಭೆ

ಶಿಬಾಜೆ: ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಆ.13ರಂದು ರಾಜೀವ ಗಾಂಧಿ ಸೇವಾ ಕೇಂದ್ರ ಪೆರ್ಲದಲ್ಲಿ ಪಂಚಾಯತ್ ಅಧ್ಯಕ್ಷರಾದ ರತ್ನ ಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ರವರು ಭಾಗವಹಿಸಿದ್ದರು.

ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ದಿನಕರ್ ಕುರುಪ್, ನಿಕಟ ಪೂರ್ವ ಉಪಾಧ್ಯಕ್ಷರಾದ ವಿನಯಚಂದ್ರ ಟಿ, ಸದಸ್ಯರುಗಳಾದ ವನಿತಾ ವಿ ಶೆಟ್ಟಿಗಾರ್, ಯಮುನಾ ಹಾಗೂ ಗ್ರಾಮಲೆಕ್ಕಾಧಿಕಾರಿ ತೇಜಸ್ವಿ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಾಡ ಗೀತೆಯನ್ನು ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ಹಾಡಿದರು.ಸ್ವಾಗತ ಮತ್ತು ವರದಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ನೆರವೇರಿಸಿದರು.

ಹಲವು ವರ್ಷಗಳಿಂದ ಪಂಚಾಯತ್ ನಲ್ಲಿ ಪಂಪ್ ಆಪರೇಟರ್ ಆಗಿ ಕೆಲಸ ನಿರ್ವಹಿಸಿ ಇದೆ ತಿಂಗಳು ನಿವೃತ್ತಿ ಹೊಂದಲಿರುವ ಸೇಸಪ್ಪ ಗೌಡ ರವರನ್ನು ಸನ್ಮಾನಿಸಲಾಯಿತು.

ಬೇರೆ ಬೇರೆ ಇಲಾಖೆಯ ಅಧಿಕಾರಿಗಳು ಇಲಾಖೆಯಿಂದ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು.

Exit mobile version