

ಮುಂಡಾಜೆ: ವಿವೇಕಾನಂದ ವಿದ್ಯವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ರಾಜ್ಯದ ಎಲ್ಲ ಶಾಲೆ-ಕಾಲೇಜುಗಳಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಮೂಲಕ ಪ್ರತಿಜ್ಞೆ ಸ್ವೀಕರಿಸುವ ಆದೇಶದಂತೆ ವಿದ್ಯಾರ್ಥಿಗಳಿಗೆ ಮತ್ತು ಸಮುದಾಯದ, ಎಲ್ಲಾ ವರ್ಗದ ಜನರ ಮಾದಕ ವ್ಯಸನ ಮಾಡದಂತೆ ನಶಾ ಮುಕ್ತ ಎಂಬ ಪ್ರತಿಜ್ಞೆಯನ್ನು ಆ.12ರಂದು ಮಾಡಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಜಯಂತಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಮುಂಡಾಜೆ ಗ್ರಾಮ ಪಂಚಾಯಿತಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ಮಜೀದ್ ವಿ ಆರ್ ಡಬ್ಲ್ಯೂ, ಎಲ್ಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಗಳು, ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.