ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.10ರಂದು ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಸ್ಥಳೀಯ ನಾಟಿವೈದ್ಯ ತಿಮ್ಮಪ್ಪ ಪೂಜಾರಿ ಬಲ್ಲಾಡಿರವರು ಆಸಿನರಾಗಿದ್ದರು.ತಿಮ್ಮಪ್ಪ ಪೂಜಾರಿ ಅವರು ತುಳುನಾಡಿನ ಪರಂಪರೆಗೆ ಸಂಬಂಧಪಟ್ಟ ತುಳು ಪಾರ್ದನ ಹಾಡುಗಳನ್ನು ಮಕ್ಕಳಿಗೆ ತಿಳಿಸಿಕೊಟ್ಟರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶೀನಪ್ಪಗೌಡರವರು ಆಟಿ ತಿಂಗಳ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಹರ್ಷಿತ ಆಟಿ ತಿಂಗಳಲ್ಲಿ ಆಚರಿಸುವ ಕಾರ್ಯಕ್ರಮಗಳ ವಿವರ ನೀಡಿದರು ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ಪವನ್ ಕುಮಾರ್ ರವರು ಸ್ವಾಗತಿಸಿ, ನಿಶಾಂತ್ ಕುಮಾರ್ ಧನ್ಯವಾದಗೈದ ಕಾರ್ಯಕ್ರಮವನ್ನು, ಶಾಲಾ ಶಿಕ್ಷಕಿ ಜಿತಿಕ್ಷಾ ನಿರೂಪಿಸಿದರು.
p>